alex Certify ತಹಶೀಲ್ದಾರ್ ಕಚೇರಿಯಲ್ಲೇ ಗುಂಡಿನ ದಾಳಿ: ಉಸಿರು ಚೆಲ್ಲಿದ ಮತ್ತೊಬ್ಬ ಕಾಶ್ಮೀರಿ ಪಂಡಿತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಹಶೀಲ್ದಾರ್ ಕಚೇರಿಯಲ್ಲೇ ಗುಂಡಿನ ದಾಳಿ: ಉಸಿರು ಚೆಲ್ಲಿದ ಮತ್ತೊಬ್ಬ ಕಾಶ್ಮೀರಿ ಪಂಡಿತ್

ಬುದ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಕಾಶ್ಮೀರಿ ಪಂಡಿತ್ ಒಬ್ಬರನ್ನು ಹತ್ಯೆಗೈದಿದ್ದು, ಇದು ಉದ್ದೇಶಿತ ದಾಳಿಯ ಮತ್ತೊಂದು ನಿದರ್ಶನವಾಗಿದೆ.

ಚಾದೂರದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಮೇಲೆ ಗುಂಡಿನ ದಾಳಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಮೇಲೆ  ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ಎಂಟು ತಿಂಗಳಿನಿಂದ ಕಾಶ್ಮೀರದಲ್ಲಿ ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಯ ಸರಣಿ ಇದಾಗಿದೆ.

ಉದ್ದೇಶಿತ ಹತ್ಯೆಗಳಲ್ಲಿ ಮೃತಪಟ್ಟವರು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದ ಹೊರಗಿನಿಂದ ಉದ್ಯೋಗಗಳನ್ನು ಹುಡುಕಿಕೊಂಡು ಬಂದ ವಲಸಿಗರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...