alex Certify ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ ಮಲೆನಾಡು ಪ್ರದೇಶವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು ಇದೇ ದಿನಾಂಕ ಜುಲೈ 18 ರಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕರೆದಿದ್ದಾರೆ.

ಕಳೆದ ವಾರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ ರಾಜ್ಯವೂ ಒಳಗೊಂಡಂತೆ ಒಟ್ಟು 56826 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳು ಗಡುವು ನೀಡಲಾಗಿದೆ.

ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ. ಅಭಿವೃದ್ದಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗಬೇಕಾಗುತ್ತದೆ. ಕರ್ನಾಟಕ ಸರ್ಕಾರ ಈ ಹಿಂದೆ ಡಾ. ಕಸ್ತೂರಿ ರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ. ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ. ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ ಎಂದಿರುವ ಸಚಿವರು, ಸೋಮವಾರದ ಸಭೆಯಲ್ಲಿ ಅಧಿಸೂಚನೆ ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...