
ಶಿವಮೊಗ್ಗ: ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಅವರು, ಡಾ. ಕಸ್ತೂರಿ ರಂಗನ್ ವರದಿ ಒಪ್ಪಿಕೊಂಡರೆ ದುಷ್ಪರಿಣಾಮ ಉಂಟಾಗುತ್ತದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿಯೂ ಸಾಕಷ್ಟು ಹಾನಿಯಾಗುತ್ತದೆ. ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಿದ್ದಾರೆ. ವರದಿ ಜಾರಿಯಿಂದ ಆಗುವ ಪರಿಣಾಮಗಳ ಬಗ್ಗೆ ಸಿಎಂ ಮನವರಿಕೆ ಮಾಡಲಿದ್ದಾರೆ ಎಂದರು.
ಯಾವುದೇ ಕಾರಣಕ್ಕೂ ಕಸ್ತೂರಿರಂಗನ್ ವರದಿ ಜಾರಿಗೆ ಬಿಡುವುದಿಲ್ಲ. ಆದರೂ, ಹಠಬಿಡದೆ ಜಾರಿಗೆ ಪ್ರಯತ್ನಿಸಿದರೆ ಹೋರಾಟಕ್ಕೆ ನಾವು ಸಿದ್ಧವಾಗಿದ್ದೇವೆ. ಕಸ್ತೂರಿರಂಗನ್ ವರದಿ ವಿಚಾರದಲ್ಲಿ ರೈತರು ಭಯಪಡುವ ಅಗತ್ಯವಿಲ್ಲ. ಪ್ರಧಾನಿ ಮೋದಿ ಮತ್ತು ದೆಹಲಿ ಅಧಿಕಾರಿಗಳೊಂದಿಗೆ ಸಿಎಂ ಮಾತನಾಡುತ್ತಾರೆ ಎಂದರು.