
ಬೆಂಗಳೂರು: ವಿರೋಧ ಪಕ್ಷದ ನಾಯಕರ ನೇಮಕ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ ನೀಡಿದ್ದಾರೆ.
ವಿಪಕ್ಷ ನಾಯಕರು ಮತ್ತು ಇತರ ಹುದ್ದೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಸೂಕ್ತ ಸಮಯದಲ್ಲಿ ಸಂಸದೀಯ ಮಂಡಳಿ ನಿರ್ಧಾರ ಪ್ರಕಟಿಸುತ್ತದೆ. ಕೆಲವರು ವಿವಿಧ ಹುದ್ದೆಯ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಪಕ್ಷದ ಸಭೆಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ ಎಂದು ರಾಜ್ಯ ಬಿಜೆಪಿ ಮುಖಂಡರಿಗೆ ನಳಿನ್ ಕುಮಾರ್ ಕಟೀಲು ಸೂಚನೆ ನೀಡಿದ್ದಾರೆ.