ಮಂಗಳೂರಿನಿಂದ ಸುಮಾರು ೨೬ ಕಿಮೀ ದೂರದಲ್ಲಿರುವ ಕಟೀಲು ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿಯ ತವರು. ನಂಬಿ ಬಂದ ಭಕ್ತರಿಗೆ ಇಷ್ಟಾರ್ಥಗಳನ್ನು ಕರುಣಿಸುವ ಮಹಾಮಾತೆ ಈ ದೇವಿ.
ನಂದಿನಿ ನದಿಯ ದಂಡೆಯ ಮೇಲಿರುವ ದುರ್ಗಾಪರಮೇಶ್ವರಿ ದೇವಾಲಯವು ಶ್ರೀಶಕ್ತಿಯ ಪೀಠವಾಗಿದ್ದು ಪುರಾಣದ ಮಹತ್ವ ಹಾಗೂ ಪ್ರಸಿದ್ಧಿಯನ್ನು ಹೊಂದಿದೆ. ಕಟೀಲು ದೇಗುಲ ಇಂದಿಗೈ ವಿದ್ಯಾದಾನ ಮತ್ತು ಅನ್ನದಾನಗಳ ಮೂಲಕ ಸಮಾಜದ ಒಳಿತಿಗೆ ಶ್ರಮಿಸುತ್ತಿದೆ.
ಈ ದೇವಾಲಯವು ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುತ್ತದೆ. ಶ್ರೀ ಕ್ಷೇತ್ರವು ಅನೇಕ ಬಗೆಯ ಕಲೆಗಳಿಗೆ ಆಶ್ರಯ, ಪ್ರೋತ್ಸಾಹವನ್ನು ನೀಡುತ್ತಿದೆ. ಆವುಗಳಲ್ಲಿ ಮುಖ್ಯವಾದ್ದು ಯಕ್ಷಗಾನ. 6 ಯಕ್ಷಗಾನ ಮೇಳಗಳು ಸೇವಾರೂಪದಲ್ಲಿ ಯಕ್ಷಗಾನ ಬಯಲಾಟವನ್ನು ನಡೆಸಿಕೊಡುತ್ತವೆ.
ವಿಶೇಷ ದಿನಗಳಂದು ಇಲ್ಲಿ ಚಂಡಿಕಾ ಹೋಮ, ತುಲಾಭಾರ, ವೇದ ಪಾರಾಯಣ, ಹರಿಕಥೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಇಲ್ಲಿ ನಡೆಯುತ್ತದೆ. ಪ್ರಕೃತಿಯ ಮಡಿಲಲ್ಲಿ ಕಂಗೊಳಿಸುವ ಈ ದುರ್ಗೆಯ ಆಲಯ ಭೇಟಿ ನೀಡುವವರ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ.