ಬೆಂಗಳೂರು : ಇದುವರೆಗೂ ಪರಿಹಾರ ಸಿಗದೇ ಇರೋ ಒಂದೇ ಒಂದು ಸಮಸ್ಯೆ ಎಂದರೆ ಅದು ಕಾವೇರಿಯದ್ದು ನಟ ಎಂದು ನಟ ಉಪೇಂದ್ರ ಹೇಳಿದ್ದಾರೆ.
ಕಾವೇರಿ ಹೋರಾಟದಲ್ಲಿ ಭಾಗಿಯಾದ ನಟ ಉಪೇಂದ್ರ ಮಾತನಾಡಿದ್ದಾರೆ. ನಾವೆಲ್ಲರೂ ಬುದ್ದಿವಂತರು. ನಮಗೆ ವಿಚಾರ ಮಾಡುವ ಶಕ್ತಿಯಿದೆ.ಇದಕ್ಕೊಂದು ಪರಿಹಾರವನ್ನು ಕಂಡುಕೊಳ್ಳಬೇಕು. ನಮ್ಮ ಸಮಸ್ಯೆಗೆ ನಾವೇ ಪರಿಹಾರ ಹುಡುಕಿಕೊಳ್ಳಬೇಕು ಎಂದರು.
ಇದೇ ವೇಳೆ ಮಾತನಾಡಿದ ನಟ ಶಿವರಾಜ್ ಕುಮಾರ್ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.ಕಾವೇರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಲಿ.ಎಂದು ವಾಣಿಜ್ಯ ಮಂಡಳಿ ಹೋರಾಟದಲ್ಲಿ ನಟ ಶಿವರಾಜ್ ಕುಮಾರ್ ಹೇಳಿದರು.ಇದೇ ವೇಳೆ ಮಾತನಾಡಿದ ನಟಿ ಪೂಜಾ ಗಾಂಧಿ ನಮ್ಮ ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ನಾಡು, ನುಡಿ, ಗಡಿ, ಜಲ ವಿಚಾರದಲ್ಲಿ ನಾವು ರಾಜಿ ಆಗುವುದಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಕೆದಕುವ ಪ್ರಯತ್ನ ಯಾರೂ ಮಾಡಬೇಡಿ, ಕಾವೇರಿ ನದಿ ನೀರು ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ನಟ ಶ್ರೀಮುರಳಿ ಹೇಳಿದರು.