ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ ವಿರೋಧಿಸಿ ಮತ್ತೆ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು ಬೀದಿಗಿಳಿದಿದ್ದು, ಅ. 18ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿವೆ.
ಹೌದು. ಕಾವೇರಿಗಾಗಿ ಅಕ್ಟೋಬರ್ 18ರಂದು ದೆಹಲಿ ಚಲೋ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ಮುಂದಾಗಿದೆ. ದೆಹಲಿಯಲ್ಲಿ ಕರವೇ ಬೃಹತ್ ಪ್ರತಿಭಟನೆ ನಡೆಸಲಿದೆ, ಈ ಹಿನ್ನೆಲೆ ಕರವೇ ಕಾರ್ಯಕರ್ತರು ನಾಳೆ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ದೆಹಲಿ ಚಲೋ ನಡೆಯಲಿದೆ ಎಂದು ತಿಳಿದು ಬಂದಿದೆ.
ಕರ್ನಾಟಕಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದೆ. ಈ ಮೂಲಕ CWRA ಆದೇಶ ಎತ್ತಿಹಿಡಿದಿದೆ.ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಸಿದ ಸಮಿತಿಯು ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆ ಮತ್ತೆ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿದೆ.