ಬೆಂಗಳೂರು : ಬೆಂಗಳೂರಲ್ಲಿ ಕಾವೇರಿ ಕಿಚ್ಚು ಜೋರಾಗಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್ ನಮ್ಮ ಪ್ರತಿಭಟನೆಯನ್ನು ಪೊಲೀಸರು ಹತ್ತಿಕ್ಕುವ ಕೆಲಸ ಮಾಡಿದ್ದಾರೆ, ನಾಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಪೊಲೀಸ್ ರಾಜ್ಯವಾಗಿದೆ. ಪ್ರತಿಭಟನೆ ಮಾಡುವುದಕ್ಕೆ ಬಿಡದೆ ನಮ್ಮನ್ನು ವಶಕ್ಕೆ ಪಡೆದಿದ್ದಾರೆ.ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲವಾದರೇ ಸೆ.29ರಂದು ರಾಜ್ಯಾದ್ಯಂತ ಭಾರಿ ಹೋರಾಟ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.