ಬೆಂಗಳೂರು : ಕಾವೇರಿ ಹೋರಾಟದ ಹಿನ್ನೆಲೆ ಸೆ.26 ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಓಲಾ, ಉಬರ್ ಕ್ಯಾಬ್ ಬೆಂಬಲ ನೀಡಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಸೆ.26 ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಓಲಾ, ಊಬರ್ ಕ್ಯಾಬ್ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹೇಳಿದ್ದಾರೆ.
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಪರ ವಿವಿಧ ಸಂಘಟನೆಗಳು ಸೆ.26 ರಂದು ‘ಬೆಂಗಳೂರು ನಗರ’ ಬಂದ್ ಘೋಷಿಸಿದೆ.ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು, ಮಂಡ್ಯ, ಮದ್ದೂರು ಭಾಗದಲ್ಲಿ ಅನ್ನದಾತನ ಆಕ್ರೋಶ ತೀವ್ರ ಸ್ವರೂಪ ಪಡೆದಿದೆ. ಸೆ.26 ರಂದು ‘ಬೆಂಗಳೂರು ನಗರ’ ಬಂದ್ ಮಾಡುವುದಾಗಿ ರೈತ ಮುಖಂಡ, ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ್ ಕುಮಾರ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.