ನವದೆಹಲಿ : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಯಾವುದೇ ಆದೇಶ ಹೊರಡಿಸದೇ ಸೆ.6 ಕ್ಕೆ ವಿಚಾರಣೆ ಮುಂದೂಡಿದೆ.
ವಾದ ವಿವಾದ ಆಲಿಸಿದ ಸುಪ್ರೀಂಕೋರ್ಟ್ ಇಂದು ಯಾವುದೇ ತೀರ್ಪು ಪ್ರಕಟಿಸಿಲ್ಲ, ತಮಿಳುನಾಡು ವಕೀಲರು ಸೆ.11 ರಂದು ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು. ಆದರೆ ಸುಪ್ರೀಂಕೋರ್ಟ್ ಸೆ.6 ಕ್ಕೆ ವಿಚಾರಣೆ ಮುಂದೂಡಿದೆ. ಆ. 28ರಂದು ದೆಹಲಿಯಲ್ಲಿ ನಡೆದಿದ್ದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಿದ ಸಭೆಯಲ್ಲಿ ತಮಿಳುನಾಡಿಗೆ ನಿತ್ಯವೂ 5 ಸಾವಿರ ಕ್ಯುಸೆಕ್ಸ್ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ಸೂಚಿಸಲಾಗಿತ್ತು.
ಕಾವೇರಿ ನದಿ ನೀರು ( kaveri river Water ) ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವಾರ ವಿಚಾರಣೆ ನಡೆಸಿದ್ದ ಕೋರ್ಟ್ ಈ ತಕ್ಷಣಕ್ಕೆ ಆದೇಶ ಹೊರಡಿಸುವುದು ಕಷ್ಟ ಎಂದು ಸೆ.1 ಕ್ಕೆ ವಿಚಾರಣೆ ಮುಂದೂಡಿತ್ತು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಿದೆ.ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯುಸೆಕ್ ನೀರು ಹರಿಸಲು ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಿ ನಡೆಸಿದ ಸಭೆಯಲ್ಲಿ ತಮಿಳುನಾಡು ಕರ್ನಾಟಕ ರಾಜ್ಯಗಳ ವಾದ-ಪ್ರತಿವಾದವನ್ನು ಆಲಿಸಿದ ಪ್ರಾಧಿಕಾರ ಆಗಸ್ಟ್ 29 ರಿಂದ ಸೆಪ್ಟೆಂಬರ್ 12 ರವರೆಗೆ ಮುಂದಿನ 15 ದಿನಗಳ ಕಾಲ ನಿತ್ಯವೂ 5 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಆದೇಶಿಸಿತ್ತು.