alex Certify BIG NEWS : ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್ : ಫೆಬ್ರವರಿಯಲ್ಲಿ ತಮಿಳುನಾಡಿಗೆ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡಲು ‘CWRC’ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್ : ಫೆಬ್ರವರಿಯಲ್ಲಿ ತಮಿಳುನಾಡಿಗೆ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡಲು ‘CWRC’ ಸೂಚನೆ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ.

ಹೌದು, ತಮಿಳುನಾಡಿಗೆ ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಗುರುವಾರ ಆದೇಶ ನೀಡಿದೆ. ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ಎಂದು ತಿಳಿಸಿತು. ಆದರೂ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...