
ಯುವ ರಾಜ್ ಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಬಹುನಿರೀಕ್ಷಿತ ‘ಯುವ’ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ತೆರೆ ಕಾಣಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ಸಿನಿಮಾದ ‘ಕವಿತೆ ಕವಿತೆ’ ಎಂಬ ಲಿರಿಕಲ್ ಹಾಡು ಸದ್ಯ youtube ಟ್ರೆಂಡಿಂಗ್ ನಲ್ಲಿದ್ದು, ಇದೀಗ ಐದು ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಸಂತಸವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸಂಜಿತ್ ಹೆಗಡೆ ಈ ಹಾಡಿಗೆ ಧ್ವನಿಯಾಗಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.
ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗುಂದೂರು ನಿರ್ಮಾಣ ಮಾಡಿದ್ದು, ಯುವರಾಜ್ ಕುಮಾರ್ ಗೆ ಜೋಡಿಯಾಗಿ ‘ಕಾಂತಾರ’ ನಟಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಆಶಿಕ್ ಸಂಕಲನ, ಶ್ರೀಶಾ ಕುಡುವಳ್ಳಿ ಛಾಯಾಗ್ರಹಣವಿದೆ, ಅಜನೇಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.