ಕಜಖಸ್ತಾನ್ ದಲ್ಲಿ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದರೂ ಇನ್ನೂ ನಿಲ್ಲುತ್ತಿಲ್ಲ. ಹೀಗಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಕಳೆದ ಒಂದು ವಾರದಿಂದ ಇಲ್ಲಿಯವರೆಗೆ ಅಲ್ಲಿ 164 ಜನ ಸಾವನ್ನಪ್ಪಿದ್ದಾರೆ. ಅಲ್ಲಿನ ಅಲ್ಮಾಟಿ ನಗರದಲ್ಲಿಯೇ ಬರೋಬ್ಬರಿ 103 ಜನ ಸಾವನ್ನಪ್ಪಿದ್ದಾರೆ.
ಅಲ್ಲಿ ಜನರ ಪ್ರತಿಭಟನೆಗೆ 16 ಜನ ಭದ್ರತಾ ಸಿಬ್ಬಂದಿಗಳು ಕೂಡ ಸಾವನ್ನಪ್ಪಿದ್ದಾರೆ. ಒಟ್ಟಾರೆ, ಸಾವಿನ ಸಂಖ್ಯೆ 164ಕ್ಕೆ ಏರಿಕೆಯಾಗಿದ್ದು, ಕಳೆದ ಒಂದು ವಾರದಿಂದ ಸ್ಥಳೀಯ ಜನರು ಇಂಧನ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಜನರು ಸಾವನ್ನಪ್ಪುವಂತಾಗಿದೆ.