ಕಲಬುರಗಿ: ಕೊರೋನಾ ಸೋಂಕಿನಿಂದ ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಶಾಣಪ್ಪ ಮೃತಪಟ್ಟಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಅವರು ಜೆ.ಹೆಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
82 ವರ್ಷದ ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.