
ಬೆಂಗಳೂರು: ಕಾಂಗ್ರೆಸ್ ನಾಯಕ ಕೆ.ಸಿ. ಕೊಂಡಯ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಕೊಂಡಯ್ಯ ಅವರಿಗೆ ಇಂದು ಮಧ್ಯಾಹ್ನ ಲಘು ಹೃದಯಾಘಾತವಾಗಿತ್ತು. ಕೂಡಲೇ ವೈದ್ಯರನ್ನು ಸಂಪರ್ಕಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆನ್ನಲಾಗಿದೆ.