ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯಲ್ಲಿ ನೋವು ಅಸ್ವಸ್ಥತೆ ಕಂಡು ಬಂದು ತೊಂದರೆ ಅನುಭವಿಸಿದ ನಂತರ ಭಾನುವಾರ ಬೆಳಿಗ್ಗೆ ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರನ್ನು ಎಐಜಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅಲ್ಲಿ ಅವರನ್ನು ಗ್ಯಾಸ್ಟ್ರೋಎಂಟರಾಲಜಿ ಮುಖ್ಯಸ್ಥರೂ ಆಗಿರುವ ಆಸ್ಪತ್ರೆಯ ಅಧ್ಯಕ್ಷ ಡಾ.ಡಿ. ನಾಗೇಶ್ವರ ರೆಡ್ಡಿ ಅವರು ಪರೀಕ್ಷಿಸಿದರು.
ತೆಲಂಗಾಣದ ಮಾನ್ಯ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರಿಗೆ ಇಂದು ಬೆಳಿಗ್ಗೆ ಹೊಟ್ಟೆಯಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದೆ ಎಐಜಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿ ನಡೆಸಲಾಯಿತು. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.