ನವದೆಹಲಿ :ನವದೆಹಲಿ: ಈಗ ರದ್ದುಪಡಿಸಲಾದ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ಶಾಸಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯವು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ಒಪ್ಪಿಸಿದೆ.
ದೆಹಲಿಯ ವಿವಾದಾತ್ಮಕ 2021-22 ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕೆ ಕವಿತಾ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ನಿನ್ನೆ ನಿರಾಕರಿಸಿತ್ತು.
ಇದೀಗ ದೆಹಲಿ ನ್ಯಾಯಾಲಯವು ಕೆ.ಕವಿತಾರನ್ನು ಮೂರು ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆ ಕೆ.ಕವಿತಾರನ್ನು ಮೂರು ದಿನ ಇಡಿ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ.