
ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕೆ.ಈ. ಕಾಂತೇಶ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ಹಾವೇರಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಪುತ್ರ ಕೆ.ಈ. ಕಾಂತೇಶ್ ಅಪೇಕ್ಷೆ ಹೊಂದಿದ್ದಾರೆ. ಪಕ್ಷದ ನಾಯಕರು ಟಿಕೆಟ್ ನೀಡುವಾಗ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ ಎಂದು ಹೇಳಿದ್ದಾರೆ.
ಹಾವೇರಿ ಸಂಸದ ಶಿವಕುಮಾರ ಉದಾಸಿ ವೈಯಕ್ತಿಕ ಕಾರಣಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದು, ಕಾಂತೇಶ್ ಹಾವೇರಿಯಿಂದ ಸ್ಪರ್ಧಿಸಲು ಬಯಸಿದ್ದಾರೆ. ಹಲವು ನಾಯಕರು ಹಾಗೂ ಮುಖಂಡರಿಗೂ ಕಾಂತೇಶ್ ಸ್ಪರ್ಧಿಸಲಿ ಎಂಬ ಬಯಕೆ ಇದೆ. ಕಾಂತೇಶ್ ಕೂಡ ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.