alex Certify ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಠ್ಯೇತರ ಪ್ರಶ್ನೆ ಕೈಬಿಟ್ಟು ಕೀ ಉತ್ತರ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಠ್ಯೇತರ ಪ್ರಶ್ನೆ ಕೈಬಿಟ್ಟು ಕೀ ಉತ್ತರ ಪ್ರಕಟ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲವನ್ನು ಸರ್ಕಾರ ಪರಿಹರಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಯುಜಿಸಿಇಟಿ -2024ರ ನಾಲ್ಕು ವಿಷಯದ ಪರೀಕ್ಷೆಗಳಿಗೆ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಿದೆ.

ಮೇ 7ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ, ರಸಾಯನ ಶಾಸ್ತ್ರ, ಭೌತಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯದಿಂದ ಹೊರತಾದ 50 ಪ್ರಶ್ನೆಗಳನ್ನು ಕೇಳಿದ್ದು, ಇವುಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈ ಬಿಡಲಾಗಿದೆ. ಉಳಿದ 190 ಪ್ರಶ್ನೆಗಳಿಗೆ ಕೀ ಉತ್ತರಗಳನ್ನು ಪ್ರಾಧಿಕಾರದ kea.kar.nic.in ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಇವುಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ಆನ್ಲೈನ್ ಪೋರ್ಟಲ್ ಮೂಲಕ ಏಪ್ರಿಲ್ 30 ರಂದು ಬೆಳಗ್ಗೆ 11 ರಿಂದ ಮೇ 7ರ ಬೆಳಗ್ಗೆ 11ರೊಳಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...