ಬೆಂಗಳೂರು: ಪ್ರಸಕ್ತ ಸಾಲಿನ ಡಿ- ಸಿಇಟಿ ಅಭ್ಯರ್ಥಿಗಳಿಗೆ ಕ್ಯಾಶುಯಲ್ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸೆಪ್ಟೆಂಬರ್ 18 ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಸೆ. 18ರಂದು ಮಧ್ಯಾಹ್ನ 2 ಗಂಟೆಗೆ ಸೀಟುಗಳ ಲಭ್ಯತೆಯನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು. ಸಂಜೆ 4 ಗಂಟೆಯಿಂದ ಸೆಪ್ಟೆಂಬರ್ 20ರವರೆಗೆ ಹೊಸದಾಗಿ ಆಪ್ಷನ್ ದಾಖಲಿಸಬಹುದಾಗಿದೆ. ಸೆಪ್ಟೆಂಬರ್ 23 ರಿಂದ 25ರವರೆಗೆ ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಇರುತ್ತದೆ. ಸೀಟು ದೊರೆತ ಕಾಲೇಜಿಗೆ ಸೆ. 25ರೊಳಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.