ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ನಡೆಯಲಿದೆ.
ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, 3,49,637 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಸಿಇಟಿಗೆ ಸ್ಪಷ್ಟವಾದ ಡ್ರೆಸ್ ಕೋಡ್ ಪ್ರಕಟಿಸುತ್ತಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಾರಿ ಯಾವುದೇ ನಿಖರ ಮಾಹಿತಿ ನೀಡಿಲ್ಲ.
ಸಿಇಟಿಯಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲಿಯೂ ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರಶ್ನೆಗೆ ಗೊಂದಲ ಉಂಟಾದಲ್ಲಿ ಇಂಗ್ಲಿಷ್ ಆವೃತ್ತಿಯನ್ನು ಅಂತಿಮವೆಂದು ಪರಿಗಣಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.