
ಬೆಂಗಳೂರು: ಸಿಇಟಿ, ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಶುಕ್ರವಾರ ಪ್ರಕಟಿಸಲಾಗಿದೆ.
ಆಗಸ್ಟ್ 31 ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್, ವಾಸ್ತುಶಿಲ್ಪ ಶಾಸ್ತ್ರ, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ ಫಾರ್ಮಾ, ಬಿಎಸ್ಸಿ ನರ್ಸಿಂಗ್, ಯೋಗ ಮತ್ತು ನ್ಯಾಚುರೋಪತಿ ಇತರೆ ಕೋರ್ಸುಗಳ ಅಭ್ಯರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ವಿವರಗಳನ್ನು ಅರ್ಥೈಸಿಕೊಂಡು ನಾಲ್ಕು ಚಾಯ್ಸ್ ಗಳಲ್ಲಿ ಸೂಕ್ತವಾದ ಕಾಲೇಜು ಮತ್ತು ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದುಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.