alex Certify ನಾಳೆಯಿಂದ `KEA’ ವಿವಿಧ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ `KEA’ ವಿವಿಧ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ ಕೇಂದ್ರದ ವಿವಿಧ ಸ್ಥಳಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ.

ನವೆಂಬರ್ 18ರಂದು ನಗರದ 03ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ 10ರಿಂದ 1ರವರೆಗೆ ನಡೆಯುವ ಮೊದಲ ಅಧಿವೇಶನ, ಮಧ್ಯಾಹ್ನ 2.30ರಿಂದ 4.30ರವರೆಗೆ ಎರಡನೇ ಅಧಿವೇಶನದಲ್ಲಿ ಪರೀಕ್ಷೆ ನಡೆಯಲಿದೆ.  ಈ ಪರೀಕ್ಷೆಗಳು ಸುಗಮವಾಗಿ ನಡೆಯಲು ಪರೀಕ್ಷಾ ಕೇಂದ್ರಗಳಿಗೆ ನೀರು, ವಿದ್ಯುತ್, ಶೌಚಾಲಯ ಮತ್ತಿತರ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಿಗೆ  ಸೂಚಿಸಲಾಗಿದೆ. ಅಲ್ಲದೇ ಶುದ್ಧ ಗಾಳಿ ಬೆಳಕು ಇರುವಂತೆ, ಪ್ರತಿ ಕೇಂದ್ರಗಳಿಗೆ ಕ್ಯಾಮರಾಗಳನ್ನು ಅಳವಡಿಸಲಾಗುತ್ತದೆ.

ಈ ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್‍ವಾಚ್. ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು  ಕಡ್ಡಾಯವಾಗಿ ನಿಷೇಧಿಸಿದೆ. ಮಹಿಳೆಯರು ಸಾಂಪ್ರದಾಯಿಕ ಆಭರಣಗಳಲ್ಲದೇ ಇತರೆ ಆಭರಣಗಳು ಧರಿಸುವುದನ್ನು, ಹಿಜಾಬ್ ಧರಿಸುವುದನ್ನು ನಿರ್ಬಂಧಿಸಲಾಗಿದೆ.

 ನಿಗಧಿಪಡಿಸಿದ ಈ ದಿನಾಂಕಗಳಂದು ನಡೆಯುವ ಪರೀಕ್ಷೆಗಳು ಸುಗಮವಾಗಿ ನಡೆಯಲು ಅಗತ್ಯ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ.  ಪ್ರತಿ ಪರೀಕ್ಷಾ ಕೇಂದ್ರಕ್ಕೆ ಎ ದರ್ಜೆಯ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೇ ತ್ರಿಸದಸ್ಯರ ಹಲವು ತಂಡಗಳನ್ನು ರಚಿಸಲಾಗಿದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕ್ರಮವಹಿಸಲಾಗಿದೆ.

 ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ಪ್ರದೇಶದ ವ್ಯಾಪ್ತಿಯೊಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ ಅಲ್ಲದೆ ಸುತ್ತಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...