
ಬೆಂಗಳೂರು: UGDental-24 ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ನ.4ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅದೇ ದಿನ ರಾತ್ರಿ 8 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ನ.5ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು.
UGNEET-24 ವೈದ್ಯಕೀಯ ಕೋರ್ಸ್ ನ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಬಾಕಿ ಇದ್ದ ಎಲ್ಲ 84 ಸೀಟುಗಳೂ ಹಂಚಿಕೆಯಾಗಿವೆ. ನ.5ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗಳಿಗೆ ವರದಿ ಮಾಡಿಕೊಳ್ಳಬೇಕು.
UGNEET-24 ವೈದ್ಯಕೀಯ ಕೋರ್ಸ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ಜು ಪ್ರಕಟಿಸಲಾಗಿದೆ. #KEA ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದ್ದು ಆಕ್ಷೇಪಣೆಗಳು ಇದ್ದಲ್ಲಿ ಸಂಜೆ 4 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು.
