ಬೆಂಗಳೂರು : ಕೆಇಎ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ತಿರಸ್ಕಾರವಾಗಿದೆ.
ತ್ರಿಮೂರ್ತಿ. ಅಂಬರೀಷ್ ಎಂಬುವವರ ಜಾಮೀನು ಅರ್ಜಿ ತಿರಸ್ಕರಿಸಿ ಕಲಬುರಗಿ 5 ನೇ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಇಬ್ಬರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಕಲಬುರಗಿಯ ಆಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಆರೋಪಿಗಳು ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದರು. ಕೆಲವು ಆರೋಪಿಗಳು ಪರೀಕ್ಷೆಯಲ್ಲಿ ನಕಲು ಮಾಡುವುದಕ್ಕೆ ಸಹಾಯ ಮಾಡಿದ್ದರು. ಈ ಹಿನ್ನೆಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.