ಬೆಂಗಳೂರು : ಕೆಇಎ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ಜಾಮೀನು ಅರ್ಜಿ ವಿಚಾರಣೆ ನ.16 ಕ್ಕೆ ಮುಂದೂಡಿಕೆಯಾಗಿದೆ.
ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಇದರ ನಡುವೆ ಈತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ನವೆಂಬರ್ 16 ಕ್ಕೆ ಮುಂದೂಡಿದೆ.
ಸದ್ಯ, ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೆ ರಕ್ಷಣೆ ನೀಡಿದ್ದ ಆರೋಪದಲ್ಲಿ ಫ್ಲಾಟ್ ಮಾಲೀಕ ಹಾಗೂ ಮ್ಯಾನೇಜರ್ ಹಾಪುರದ ಶಂಕರ ಗೌಡಯಾಳವಾರ್ ಹಾಗೂ ದಿಲೀಪ್ ಪವಾರ್ ನನ್ನು ಬಂಧಿಸಲಾಗಿದೆ . ಅದೇ ರೀತಿ ಪಾಟೀಲ್ ಸಹಚರ ಶಿವಕುಮಾರ್ ನನ್ನು ಕೂಡ ಬಂಧಿಸಲಾಗಿದೆ.