ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಶೀಘ್ರವೇ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೆಸೆಟ್ ನಡೆಯದ ಬಗ್ಗೆ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡ ಸರ್ಕಾರದ ಗಮನ ಸೆಳೆದಿದ್ದು, ಸಚಿವರು ಉತ್ತರ ನೀಡಿದ್ದಾರೆ.
ಅರ್ಹತೆ ಇರುವ ಯಾವುದೇ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೆಇಎ ಮೂಲಕ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಂಡಿದೆ. ಯುಜಿಸಿ ಸಾಮಾನ್ಯ ಪ್ರಕ್ರಿಯೆ ಪೂರ್ಣಗೊಂಡ ನಂತರ ಕೆ -ಸೆಟ್ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.