
ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿ ಸೇರಿ ಮೂವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಪರೀಕ್ಷಾ ಅಭ್ಯರ್ಥಿಗಳಿಗೆ ಬ್ಲೂಟೂತ್ ಸಪ್ಲೈ ಮಾಡಿದ ಆರೋಪದಡಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಸೂಚನೆಯಂತೆ ಬ್ಲೂಟೂತ್ ನ್ನು ಇವರು ಸಪ್ಲೈ ಮಾಡುತ್ತಿದ್ದರು ಎಂಬ ಸ್ಫೋಟಕ ಮಾಹಿತಿಯನ್ನು ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ಕೆಇಎ ನಡೆಸಿದ ವಿವಿಧ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಕೆಲ ಅಭ್ಯರ್ಥಿಗಳು ಪರೀಕ್ಷೆ ಬರೆದು ಅಕ್ರಮವೆಸಗಿದ್ದರು. ಈ ಹಿನ್ನೆಲೆಯಲ್ಲಿ ಈಗಾಗಲೇ ಯಾದಗಿರಿ, ಕಲಬುರ್ಗಿಯಲ್ಲಿ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಪಿಎಸ್ ಐ ನೇಮಕಾತಿ ಪರೀಕ್ಷಾ ಹಗರಣದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನೇ ಕೆಇಎ ಪರೀಕ್ಷಾ ಅಕ್ರಮದ ರೂಪಾರಿಯೂ ಆಗಿದ್ದು, ಈ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ.