
ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ.
ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ತನಿಖಾಧಿಕಾರಿಗಳಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದರು.