alex Certify BIG NEWS: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಆರ್.ಡಿ ಪಾಟೀಲ್ ಮತ್ತೆ ಸಿಐಡಿ ಕಸ್ಟಡಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಇಎ ಪರೀಕ್ಷಾ ಅಕ್ರಮ; ಕಿಂಗ್ ಪಿನ್ ಆರ್.ಡಿ ಪಾಟೀಲ್ ಮತ್ತೆ ಸಿಐಡಿ ಕಸ್ಟಡಿಗೆ

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು ಸಿಐಡಿ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಆರ್.ಡಿ.ಪಾಟೀಲ್ ನನ್ನು ಮತ್ತೆ 8 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕೋರ್ಟ್ ಗೆ ಹಾಜರು ಪಡಿಸಿದ್ದ ಸಿಐಡಿ ಪೊಲೀಸರು, ಆರೋಪಿಯ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದರು.

ಸಿಐಡಿ ಪೊಲೀಸರ ಮನವಿ ಮೇರೆಗೆ ಕಲಬುರ್ಗಿ ಜೆ ಎಂ ಎಫ್ ಸಿ ನ್ಯಾಯಾಲಯ ಆರ್.ಡಿ.ಪಾಟೀಲ್ ನನ್ನು ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಆರ್.ಡಿ.ಪಾಟೀಲ್ ನ ಇನ್ನಷ್ಟು ಅಕ್ರಮಗಳು ಹೊರಬರುವ ಸಾಧ್ಯತೆ ಇದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...