ಕಲಬುರ್ಗಿ : ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಬಂಧನವಾಗಿದ್ದು,
ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಇದೀಗ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನನ್ನು 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಎರಡನೇ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪರೀಕ್ಷಾ ಅಕ್ರಮ ಸಂಬಂಧ 15 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಈ ವೇಳೆ ಆರ್.ಡಿ.ಪಾಟೀಲ್ ಹಣ ಪಡೆದಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಆರ್.ಡಿ.ಪಾಟೀಲ್ ಅಂದಾಜು 300 ಜನ ಅಭ್ಯರ್ಥಿಗಳಿಂದ 35-40 ಕೋಟಿ ಹಣ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ತಿಳಿದುಬಂದಿದೆ.
ಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದರು. ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ಆಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.