ಬೆಂಗಳೂರು : ‘KEA ‘ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಆರೋಪಿ ಆಸಿಫ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ನೀಡಲು ಸಹಕರಿಸುತ್ತಿದ್ದನು ಎಂಬುದು ಬಯಲಾಗಿದೆ. ಪ್ರಮುಖ ಆರೋಪಿಯಾದ ಆರ್ ಡಿ ಪಾಟೀಲ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಯಾದಗಿರಿಯಲ್ಲಿ ಅಕ್ಟೋಬರ್ 28ರಂದು ನಡೆದ ಕೆಇಎ ಪರೀಕ್ಷೆಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಯಾದಗಿರಿ ಪೊಲೀಸರು ಬಂಧಿಸಿದ್ದರು,ಓಂಕಾರ್, ನಾಮಕಾರ್, ಪ್ರಭುಲಿಂಗ, ರಾಹುಲ್, ಖಾಜಾಸಾಬ್, ಶ್ರೀಶೈಲ, ಬಸವರಾಜ ಬಂಧಿತ ಆರೋಪಿಗಳು. ಪರೀಕ್ಷೆಯಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದ ಇಬ್ಬರು ಹಾಗೂ ಹೊರಗಿನಿಂದ ಉತ್ತರ ಹೇಳುತ್ತಿದ್ದ ಐದು ಜನರನ್ನು ಪೊಲೀಸರು ಬಂಧಿಸಿದ್ದರು.
ಕಲ್ಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಪರೀಕ್ಷೆ ಬರೆಯುವಾಗ ಅಕ್ರಮ ಎಸಗಿದ್ದ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ 16 ಜನರನ್ನು ಬಂಧಿಸಲಾಗಿತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಬ್ಲೂಟೂತ್ ಬಳಸಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ.