alex Certify ಸರ್ಕಾರದಿಂದ ಮಹತ್ವದ ನಿರ್ಧಾರ: ಕೆಇಎ ಮೂಲಕ ಕೆ-ಸೆಟ್ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದಿಂದ ಮಹತ್ವದ ನಿರ್ಧಾರ: ಕೆಇಎ ಮೂಲಕ ಕೆ-ಸೆಟ್ ಪರೀಕ್ಷೆ

ಬೆಂಗಳೂರು: ಕೆಇಎ ಮೂಲಕ ಕೆ -ಸೆಟ್ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಕೆ –ಸೆಟ್ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಾಗಿದೆ.

2021 ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಕೆ -ಸೆಟ್ ಪರೀಕ್ಷೆ ನಡೆಸಲಾಗಿತ್ತು. ಕೆ-ಸೆಟ್ ಪರೀಕ್ಷೆಯಲ್ಲಿ ಅವ್ಯವಹಾರ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ -ಸೆಟ್ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.

ಉನ್ನತ ಶಿಕ್ಷಣ ಇಲಾಖೆ ಈ ಕುರಿತಾಗಿ ಆದೇಶ ಹೊರಡಿಸಿದೆ. ಮೈಸೂರು ವಿವಿ ಕೆ -ಸೆಟ್ ನಡೆಸುವ ನೋಡೆಲ್ ಏಜೆನ್ಸಿಯಾಗಿದ್ದು, ಯುಜಿಸಿ ಮಾನ್ಯತೆ ಪಡೆದಿತ್ತು. ಪ್ರತಿ ವರ್ಷ 42 ವಿಷಯಗಳಲ್ಲಿ ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಯಲ್ಲಿ ಅವ್ಯವಹಾರ ನಡೆದ ಹಿನ್ನೆಲೆಯಲ್ಲಿ ಕೆಇಎ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...