alex Certify ವೃತ್ತಿಪರ ಕೋರ್ಸ್ ಪ್ರವೇಶ: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೃತ್ತಿಪರ ಕೋರ್ಸ್ ಪ್ರವೇಶ: ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್ ಸೇರಿದಂತೆ ಎಲ್ಲಾ ವೃತ್ತಿಪರ ಕೋರ್ಸ್ ಗಳ ಪ್ರವೇಶದ ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಈ ಬಗ್ಗೆ ಮಾಹಿತಿ ನೀಡಿದ್ದು,  ಆಗಸ್ಟ್ 27ರಂದು ಬೆಳಗ್ಗೆ 11 ಗಂಟೆಯವರೆಗೆ ಅಭ್ಯರ್ಥಿಗಳು ಕಾಲೇಜು ಮತ್ತು ಕೋರ್ಸ್ ಗಳನ್ನು ಬದಲಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ನಿಗದಿಯಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆ ಫಲಿತಾಂಶವನ್ನು ಸೆಪ್ಟೆಂಬರ್ 1 ರಂದು ಪ್ರಕಟಿಸಲಾಗುವುದು. ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗಮನಿಸುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...