
ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನಡೆಸಲಾದ ನಿರ್ವಾಹಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.
ಸೆ. 1 ರಂದು ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಪರೀಕ್ಷೆ ನಡೆಸಲಾಗಿದ್ದು, ಸೆ. 2 ರಂದು ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಸೆ. 5 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಸ್ವೀಕೃತ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿ ಮೂಲಕ ಪರಿಶೀಲಿಸಿ ಅವರ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ಸೆ. 11ರಂದು ಪ್ರಕಟಿಸಲಾಗಿತ್ತು.
ತಾತ್ಕಾಲಿಕ ಅಂಕಗಳಿಗೆ ಆಕ್ಷೇಪಣೆ ಸಲ್ಲಿಸಲು ಸೆ. 18ರವರೆಗೆ ಅವಕಾಶ ನೀಡಲಾಗಿತ್ತು. ಆಕ್ಷೇಪಣೆಗಳ ಪರಿಶೀಲನೆ ಬಳಿಕ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.