ಬೆಂಗಳೂರು: ಐದು ನಿಗಮ ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ -ನವಂಬರ್ ನಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಸ್ವೀಕೃತ ಆಕ್ಷೇಪಣೆಗಳ ಪರಿಶೀಲನೆಯ ನಂತರ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ. ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಿಸಿದ ಇಲಾಖೆ, ಸಂಸ್ಥೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಸ್ತಾಂತರಿಸಲಾಗುತ್ತದೆ. ನಂತರ ಸಂಬಂಧಿಸಿದ ಇಲಾಖೆ, ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮ ವಹಿಸಲಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ 386 ಹುದ್ದೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 186 ಹುದ್ದೆ, ಎಂಎಸ್ಐಎಲ್ 72, ಕಿಯೋನಿಕ್ಸ್ 26 ಹುದ್ದೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಹುದ್ದೆ ಸೇರಿ ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಇವುಗಳ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ.