
ಬೆಂಗಳೂರು: ಸ್ನಾತಕೋತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಆಪ್ಷನ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪೋರ್ಟಲ್ ತೆರೆದಿದ್ದು, ಜನವರಿ 23ರ ಮಧ್ಯಾಹ್ನ 1 ಗಂಟೆಯವರೆಗೆ ಆಪ್ಷನ್ ದಾಖಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.
PGMedical-24 ಕೋರ್ಸ್ಗಳ ಪ್ರವೇಶಕ್ಕೆ ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಆಪ್ಷನ್ ದಾಖಲಿಸಲು ಜ.23ರವರೆಗೆ ಅವಕಾಶ ನೀಡಲಾಗಿದೆ.
ಜ.24ರಂದು ಸೀಟು ಹಂಚಿಕೆಯ ತಾತ್ಕಾಲಿಕ & ಜ.28ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿವರಗಳಿಗೆ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

