ಬೆಂಗಳೂರು: ವೈದ್ಯಕೀಯ ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಯುಜಿ ನೀಟ್ ಅಭ್ಯರ್ಥಿಗಳು ನೋಂದಣಿ ಮಾಡಿ ತಮ್ಮ ನೀಟ್ ರೋಲ್ ನಂಬರ್ ನಮೂದಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮತ್ತೊಮ್ಮೆ ಅವಕಾಶ ನೀಡಿದೆ.
ಆಗಸ್ಟ್ 16ರ ಸಂಜೆ 6 ಗಂಟೆಯಿಂದ ಆಗಸ್ಟ್ 19ರಂದು ಬೆಳಿಗ್ಗೆ 10 ಗಂಟೆಯವರೆಗೆ ಯುಜಿ ನೀಟ್ ಅಭ್ಯರ್ಥಿಗಳು ನೋಂದಣಿ ಮಾಡಿ ತಮ್ಮ ನೀಟ್ ರೋಲ್ ನಂಬರ್ ನಮೂದಿಸಬಹುದು. ಇದು ಅಂತಿಮ ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.