ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಿಇಟಿ-2025ರ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ.
ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತ, ಜೀವವಿಜ್ಞಾನ ವಿಷಯಗಳ ಪಠ್ಯಕ್ರಮವನ್ನು ಅಪ್ ಲೋಡ್ ಮಾಡಲಾಗಿದೆ.
ವೆಬ್ಸೈಟ್ ಗಮನಿಸಿ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುವಂತೆ ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ. NCRTC ಪಠ್ಯಕ್ರಮ, ಶಾಲಾ ಶಿಕ್ಷಣ(ಪಿಯು) ಇಲಾಖೆ ಪ್ರಕಟಿಸಿದ ಪಠ್ಯಪುಸ್ತಕಗಳನ್ನು ಆಧಾರವಾಗಿಟ್ಟುಕೊಂಡು ಪಠ್ಯಕ್ರಮ ರೂಪಿಸಲಾಗಿದೆ. ಪಿಯು ಕಾಲೇಜುಗಳ ವಿಷಯ ತಜ್ಞರಿಂದಲೂ ಪರಿಶೀಲನೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.