
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ), ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಾರ್ಚ್ 24ರಂದು ಅಧಿಸೂಚನೆ ಪ್ರಕಟಿಸಲಿದೆ.
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ 76 ಹುದ್ದೆಗಳು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ 25 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುವುದು.
ಮಾರ್ಚ್ 24 ರಿಂದ ಏಪ್ರಿಲ್ 23ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 25 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ, ಹುದ್ದೆಯ ವಿವರ, ವೇತನ ಶ್ರೇಣಿ, ಅಭ್ಯರ್ಥಿಗಳ ಅರ್ಹತೆ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ, ನೇಮಕಾತಿ ವಿವರ ಮತ್ತು ಪ್ರವರ್ಗವಾರು ಹುದ್ದೆಗಳ ವಿವರಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗುವುದು.