
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಸೀಟು ಸಿಗದ 4897 ವಿದ್ಯಾರ್ಥಿಗಳು ಪಾವತಿಸಿದ ಶುಲ್ಕ, ಮುಂಗಡ ಠೇವಣಿ ಹಣವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಹಿಂದಿರುಗಿಸಿದೆ.
ಸ್ಟ್ರೇವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೊದಲು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಶುಲ್ಕವನ್ನು ಮುಂಗಡವಾಗಿ ಪಡೆದುಕೊಳ್ಳಲಾಗಿತ್ತು. ನಂತರ ಆಪ್ಷನ್ ದಾಖಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸೀಟು ಸಿಗದ ವಿದ್ಯಾರ್ಥಿಗಳ ಶುಲ್ಕವನ್ನು ಹಿಂದಿರುಗಿಸಲಾಗಿದೆ.
ಇನ್ನೂ 160 ವಿದ್ಯಾರ್ಥಿಗಳು ಬ್ಯಾಂಕಿನ ಐಎಫ್‌ಎಸ್‌ಸಿ ಕೋಡ್ ತಪ್ಪಾಗಿ ನಮೂದಿಸಿದ್ದು, ಅಂತವರಿಗೆ ಹಣ ಹಿಂದಿರುಗಿಸಿಲ್ಲ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ ಸ್ಟ್ರೇವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಆಪ್ಷನ್ ದಾಖಲಿಸಲು ನವೆಂಬರ್ 22 ಕೊನೆಯ ದಿನವಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.