ಬೆಂಗಳೂರು: ವಿವಿಧ ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಹೆಚ್ಚಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮುಂದಿನ ಮೂರು ತಿಂಗಳ ಕಾಲ ಸಾರ್ವಜನಿಕ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿದೆ.
ರಜೆ ದಿನ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಮತ್ತೊಂದು ದಿನ ರಜೆ ನೀಡಲಾಗುವುದು. ರಜೆ ಪಡೆಯದವರಿಗೆ ಹೆಚ್ಚುವರಿ ವೇತನ ಪಾವತಿಸುವುದು.
ಕಳೆದ ಎರಡು ತಿಂಗಳಿಂದ ಸಿಇಟಿ ಪ್ರಕ್ರಿಯೆ ಪ್ರಗತಿಯಲ್ಲಿದೆ. 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರೊಂದಿಗೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿವೆ. ನಾಲ್ಕು ತಿಂಗಳ ಅವಧಿಯಲ್ಲಿ ಸಿಇಟಿ, ಡಿಸಿಇಟಿ, ಪಿಜಿಸಿಇಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯುತ್ತಿವೆ. ಲಭ್ಯವಿರುವ ಸಂಪನ್ಮೂಲ ಬಳಕೆ ಮಾಡಿಕೊಂಡು ಕೆಲಸ ಮಾಡಬೇಕಿರುವುದರಿಂದ ರಜೆ ದಿನಗಳಲ್ಲಿಯೂ ಕೆಲಸ ಮಾಡುವ ಅನಿವಾರ್ಯತೆ ಇದೆ.
ರಜೆ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದ ಸಿಬ್ಬಂದಿ ಈ ರಜೆಯನ್ನು ಬೇರೆ ದಿನಗಳಿಗೆ ಸರಿದೂಗಿಸಿಕೊಳ್ಳುವಂತೆ ತಿಳಿಸಲಾಗಿದೆ. ರಜೆ ಪಡೆಯದವರು ರಜೆ ದಿನ ಕರ್ತವ್ಯ ನಿರ್ವಹಿಸಿದ್ದಕ್ಕೆ ಹೆಚ್ಚುವರಿ ವೇತನ ನೀಡುವುದಾಗಿ ತಿಳಿಸಲಾಗಿದೆ. ಮೂರು ತಿಂಗಳಲ್ಲಿ ಹಬ್ಬದ ದಿನ ಹೊರತುಪಡಿಸಿ ಎಲ್ಲಾ ದಿನಗಳಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯ ನಿರ್ವಹಿಸಲಿದೆ.