alex Certify ಕೇರಳ ಭೂಕುಸಿತದಲ್ಲಿ ಭಾರಿ ಸಾವು ನೋವು: ಸಹಾಯ ಹಸ್ತ ಚಾಚಿದ ಕರ್ನಾಟಕ: ಪರಿಹಾರ ಸಾಮಗ್ರಿ ರವಾನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳ ಭೂಕುಸಿತದಲ್ಲಿ ಭಾರಿ ಸಾವು ನೋವು: ಸಹಾಯ ಹಸ್ತ ಚಾಚಿದ ಕರ್ನಾಟಕ: ಪರಿಹಾರ ಸಾಮಗ್ರಿ ರವಾನೆ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದಿಂದಾಗಿ ಬಹಳಷ್ಟು ಸಾವು ನೋವಾಗಿದ್ದು, ಕರ್ನಾಟಕದಿಂದ ಸಹಾಯಹಸ್ತ ಚಾಚಲಾಗಿದೆ.

ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಮಾಹಿತಿ ನೀಡಿದ್ದು, ದೇಶದ ಯಾವುದೇ ಭಾಗದಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಪರಸ್ಪರ ನೆರವಿಗೆ ನಿಲ್ಲಬೇಕಿರುವುದು ನಮ್ಮ ಕರ್ತವ್ಯ ಎಂದು ಭಾವಿಸಿದ್ದೇನೆ. ಈ ಹಿನ್ನೆಲೆಯಲ್ಲಿ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಸಮನ್ವಯಕ್ಕಾಗಿ ಇಬ್ಬರು ಹಿರಿಯ ಐಎಎಸ್‌ ಅಧಿಕಾರಿಗಳಾದ ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ರಾಜ್ಯ ಸರ್ಕಾರ ನಿಯೋಜಿಸಿದೆ ಎಂದು ತಿಳಿಸಿದ್ದಾರೆ.

ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಮಾನವೀಯ ನೆಲೆಯಲ್ಲಿ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್.ಡಿ.ಆರ್.ಎಫ್. ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳನ್ನು ತ್ವರಿತವಾಗಿ ರವಾನಿಸಲಾಗಿದೆ. ಈ ತಂಡಗಳ ಜೊತೆಗೆ ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಒದಗಿಸಲಿದೆ. ರಕ್ಷಣಾ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ ಬಂಡಿಪುರ ಚೆಕ್ ಪೋಸ್ಟ್ ನಲ್ಲಿ ಎನ್.ಡಿ.ಆರ್.ಎಫ್. ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.

ಕೇರಳ ಸರ್ಕಾರದ ವಿಪತ್ತು ನಿರ್ವಹಣೆಯ ಅಧಿಕಾರಿಗಳೊಂದಿಗೆ ರಾಜ್ಯ ಸರ್ಕಾರ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ. ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್ ಗಳನ್ನು  ಹೆಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ.

ಚಾಮರಾಜ ನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ ಸಂಖ್ಯೆಗಳು:

08226-223163

08226-223161

08226-223160

ವಾಟ್ಸಾಪ್‌ ಸಂಖ್ಯೆ: 9740942901

ವಯನಾಡಿನಲ್ಲಿ ಕನ್ನಡಿಗರು ಸಿಲುಕಿಕೊಂಡಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದ್ದು, ಅವರ ರಕ್ಷಣೆಗೆ ಗರಿಷ್ಠ ಪ್ರಯತ್ನವನ್ನು ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...