alex Certify BIG NEWS: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕ ಹೃದಯಾಘಾತದಿಂದ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳದ ಅರ್ಚಕ ಹೃದಯಾಘಾತದಿಂದ ದುರ್ಮರಣ

ಋಷಿಕೇಶ: ಕೇದಾರನಾಥ ಯಾತ್ರೆಗೆ ತೆರಳಿದ್ದ ಕೊಪ್ಪಳ ಮೂಲದ ಅರ್ಚಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಕೊಪ್ಪಳ ನಿವಾಸಿ ಸಿದ್ದಯ್ಯ ಹಿರೇಮಠ (32) ಮೃತ ದುರ್ದೈವಿ. ಜೂನ್ 10ರಂದು ಅರ್ಚಕ ಸಿದ್ದಯ್ಯ ಕೇದಾರನಾಥ ಯಾತ್ರೆಗೆ ತೆರಳಿದ್ದರು. ಹತ್ತು ದಿನಗಳಿಂದ ಧಾರ್ಮಿಕ ಸ್ಥಳಗಳ ದರ್ಶನ ಪಡೆಯುತ್ತಿದ್ದರು. ಕೇದಾರನಾಥ ದರ್ಶನ ಮುಗಿಸಿ ಋಷಿಕೇಶಗೆ ಬಂದಾಗ ಸಿದ್ದಯ್ಯ ಅವರಿಗೆ ಹೃದಯಾಘಾತವಾಗಿದೆ. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಸಿದ್ದಯ್ಯ ಹಿರೇಮಠ ಈ ಮೊದಲು ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಅರ್ಚಕರಾಗಿದ್ದರು. ಪ್ರಸ್ತುತ ಕೊಪ್ಪಳದ ಶಿವರಾತ್ರೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...