alex Certify ಶಾಲಾ ಗ್ರಂಥಾಲಯಗಳಲ್ಲಿ ಪ್ರಧಾನಿ ಮೋದಿ ‘ಎಕ್ಸಾಂ ವಾರಿಯರ್ಸ್’ ಪುಸ್ತಕ ಇರಿಸಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಗ್ರಂಥಾಲಯಗಳಲ್ಲಿ ಪ್ರಧಾನಿ ಮೋದಿ ‘ಎಕ್ಸಾಂ ವಾರಿಯರ್ಸ್’ ಪುಸ್ತಕ ಇರಿಸಲು ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬರೆದಿರುವ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕವನ್ನು ಶಾಲಾ ಗ್ರಂಥಾಲಯಗಳಲ್ಲಿ ಲಭ್ಯವಾಗುವಂತೆ ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒತ್ತಾಯಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಶಿಕ್ಷಣ ಸಚಿವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ(ಯುಟಿ) ಆಡಳಿತಗಾರರಿಗೆ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕಗಳನ್ನು ‘ಸಮಗ್ರ ಶಿಕ್ಷಾ’ ಅಡಿಯಲ್ಲಿ ಪ್ರತಿ ಶಾಲೆಯ ಗ್ರಂಥಾಲಯಗಳಲ್ಲಿ ಲಭ್ಯವಾಗುವಂತೆ ಕ್ರಮಕೈಗೊಳ್ಳಲು ತಿಳಿಸಿದ್ದಾರೆ, ಇದರಿಂದ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಪ್ರಧಾನಮಂತ್ರಿಯವರ ಬುದ್ಧಿವಂತಿಕೆ ಮತ್ತು ದೂರದೃಷ್ಟಿಯ ಮಾತುಗಳಿಂದ ಪ್ರಯೋಜನ ಪಡೆಯಿರಿ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಮಾರ್ಗಗಳು ಮತ್ತು ವಿಧಾನಗಳ ಕುರಿತು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ವಿಶಿಷ್ಟವಾದ ಕ್ರಿಯಾಶೀಲ ‘ಟಿಪ್ಸ್’ಗಳನ್ನು ಪುಸ್ತಕ ಒಳಗೊಂಡಿದೆ.

ನ್ಯಾಷನಲ್ ಬುಕ್ ಟ್ರಸ್ಟ್ ಎಕ್ಸಾಮ್ ವಾರಿಯರ್ಸ್‌ನ ಅನುವಾದಗಳನ್ನು 11 ಭಾರತೀಯ ಭಾಷೆಗಳಲ್ಲಿ ಪ್ರಕಟಿಸಿದೆ, ಅಸಾಮಿಯಾ, ಬಾಂಗ್ಲಾ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...