ಉದಯಪುರ ಟೈಲರ್ ಹತ್ಯೆ ಪ್ರಕರಣ ಬೆಚ್ಚಿಬೀಳಿಸುವಂತಿತ್ತು. ಈ ಘಟನೆ ಜನರ ಮನಸ್ಸಿನಲ್ಲಿ ಇನ್ನೂ ಹಸಿಯಾಗಿದೆ. ಈ ನಡುವೆಯೇ ಬಿಜೆಪಿ ಶಾಸಕ ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್ ನಗರದ ಖತೌಲಿ ಕ್ಷೇತ್ರದ ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರು ನಗರದ ವ್ಯಾಪಾರಿಗಳಿಗೆ ಸುರಕ್ಷತಾ ಸಲಹೆಗಳನ್ನು ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ವಿವಾದ ಸೃಷ್ಟಿಸಿದೆ.
ಕಾರ್ಯಕ್ರಮವೊಂದರಲ್ಲಿ ಅವರು ಅಂಗಡಿಯವರು ಮತ್ತು ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿದರು. ಜನರು ತಮ್ಮ ತಮ್ಮ ಅಂಗಡಿಗಳಲ್ಲಿ ಕಲ್ಲು, ಸಲಿಕೆ ಮತ್ತು ಪಿಸ್ತೂಲ್ಗಳನ್ನು ಇಟ್ಟುಕೊಳ್ಳಬೇಕು ಎಂದು ಶಾಸಕ ಸೈನಿ ಹೇಳುತ್ತಿರುವುದು ವಿಡಿಯೊದಲ್ಲಿದೆ.
ಪೊಲೀಸರು ಎಷ್ಟು ದಿನ ಈ ಭದ್ರತಾ ಕೆಲಸ ಮಾಡುತ್ತಾರೆ ? ಪೊಲೀಸರು ಬರುವಷ್ಟರಲ್ಲಿ ನಿಮ್ಮ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿರುತ್ತದೆ ಎಂದು ಸೈನಿ ವ್ಯಾಪಾರಿಗಳನ್ನು ಎಚ್ಚರಿಸುತ್ತಾರೆ.
ಶನಿವಾರ ಜನಸತ್ ತಹಸಿಲ್ ಪ್ರದೇಶದ ವಾಜಿದ್ಪುರ ಕವಾಲಿ ಗ್ರಾಮದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ವಿಡಿಯೊವನ್ನು ಚಿತ್ರೀಕರಿಸಲಾಗಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಗೆಲುವು ಸಾಧಿಸಿದ್ದಕ್ಕಾಗಿ ಕೇಂದ್ರ ರಾಜ್ಯ ಸಚಿವ ಸಂಜೀವ್ ಬಲ್ಯಾನ್ ಮತ್ತು ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರನ್ನು ಸನ್ಮಾನಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಮಾರಂಭದಲ್ಲಿ ಶಾಸಕ ಸೈನಿ ಭಾಷಣ ಮಾಡಿದ್ದು, ಅದನ್ನು ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಪ್ರವಾದಿ ವಿವಾದದ ಬಗ್ಗೆಯೂ ಮಾತನಾಡುತ್ತಾ, “ನೂಪುರ್ ಶರ್ಮಾ ಮಾತನಾಡುವುದು ಅವರ ಪ್ರಜಾಸತ್ತಾತ್ಮಕ ಹಕ್ಕು, ಹಿಂದೂ ದೇವತೆಗಳ ವಿರುದ್ಧ ಮಾತನಾಡಲು ಏನು ಹಕ್ಕಿದೆ, ಆದರೆ ಯಾರಾದರೂ ಅವರ ವಿರುದ್ಧ ಏನಾದರೂ ಹೇಳಿದರೆ ತಲೆ ಕತ್ತರಿಸಲಾಗುತ್ತದೆ ಎಂದು ಅವರು ಹೇಳುತ್ತಾರೆ.