alex Certify ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೊಳಗಾದ ದೇಶದ ಮೊದಲ ನಾಯಕ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿಂದಲೇ ಆಡಳಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಹುದ್ದೆಯಲ್ಲಿದ್ದಾಗಲೇ ಬಂಧನಕ್ಕೊಳಗಾದ ದೇಶದ ಮೊದಲ ನಾಯಕ ಕೇಜ್ರಿವಾಲ್ ರಾಜೀನಾಮೆ ಇಲ್ಲ: ಜೈಲಿಂದಲೇ ಆಡಳಿತ

ನವದೆಹಲಿ: ದೆಹಲಿ ಮದ್ಯದಂಗಡಿ ಲೈಸೆನ್ಸ್ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ.

ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್, ಮನೀಶ್ ಸಿಸೊಡಿಯಾ, ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಮತ್ತು ತೆಲಂಗಾಣದ ಬಿ.ಆರ್.ಎಸ್. ಪಕ್ಷದ ಶಾಸಕಿ ಕವಿತಾ ಅವರ ಬಳಿಕ ಮುಖ್ಯಮಂತ್ರಿ ಅರವಿಂದ್  ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಅಧಿಕಾರದಲ್ಲಿದ್ದಾಗಲೇ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದ್ದು, ಸಿಎಂ ಹುದ್ದೆಯಲ್ಲಿದ್ದಾಗ ಬಂಧಿತನಾದ ದೇಶದ ಮೊದಲ ನಾಯಕ ಅವರಾಗಿದ್ದಾರೆ. ಬಂಧನಕ್ಕೊಳಗಾದರೂ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಅವರು ತಮ್ಮ ಎಲ್ಲಾ ಖಾತೆಗಳನ್ನು ತ್ಯಜಿಸಲಿದ್ದಾರೆ. ಜೈಲಿನಿಂದಲೇ ಆಡಳಿತ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...