ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ಗುಡ್ಡದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದಾಗಿ ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿದೆ.
ಬಿಸಿಲ ಝಳ ದಿನದಿಂದ ದಿನಕ್ಕೆ ಏರುತ್ತಿದ್ದು, ಚಿಕ್ಕಮಗಳೂರು, ಪಶ್ಚಿಮ ಘಟ್ಟ ಭಾಗದಲ್ಲಿ ಕಾಡ್ಗಿಚ್ಚುಳು ಸಂಭವಿಸುತ್ತಿವೆ. ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು, ಪ್ರಾಣಿ-ಪಕ್ಷಿಗಳು ನಾಶವಾಗಿವೆ. ಶೋಲಾ ಅರಣ್ಯಪ್ರದೇಶ ಬೆಂಕಿಯಲ್ಲಿ ಧಗಧಗಿಸಿ ಉರಿಯುತ್ತಿದೆ.
ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಸೋಮವಾರ ರಾತ್ರಿಯಿಂದ ಕೆಮ್ಮಣ್ಣುಗುಂಡಿ ಬೆಟ್ಟ ಕಾಡ್ಗಿಚ್ಚಿನ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ.