ಬೆಂಗಳೂರು: ನ. 11 ರಂದು KIAB ಬಳಿ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ ನಡೆಯಲಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿಯವರು ಕಾರ್ಯಕ್ರಮದ ಕುರಿತಾಗಿ ಚರ್ಚೆ ನಡೆಸುವರು. ನ. 11ರಂದು ಇತರೆ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತಾಗಿ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸುವವರು.
ಇಂದು MPO ಗೆ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಗುವುದು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪ್ರಾತ್ಯಕ್ಷಿಕೆ ನೀಡಲಿದ್ದಾರೆ ಎನ್ನಲಾಗಿದೆ.