alex Certify BIG NEWS: ಕೆರಗೋಡು ಧ್ವಜ ವಿವಾದ; ವಿಧಾನಸಭೆಯಲ್ಲಿ ಪ್ರತಿಧ್ವನಿ; ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲ ಕೋಲಾಹಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆರಗೋಡು ಧ್ವಜ ವಿವಾದ; ವಿಧಾನಸಭೆಯಲ್ಲಿ ಪ್ರತಿಧ್ವನಿ; ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲ ಕೋಲಾಹಲ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಧ್ವಜ ವಿವಾದ ಪ್ರಕರಣ ವಿಧಾನಸಭೆ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕೆರಗೋಡು ಗ್ರಾಮದಲ್ಲಿ ಹನುಮಧ್ವಜವನ್ನು ಪೊಲೀಸರ ಮೂಲಕ ಸರ್ಕಾರ ತೆಗೆಸಿದೆ ಎಂದು ಆರೋಪಿಸಿದರು. ಇದಕ್ಕೆ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ರಾಷ್ಟ್ರಧ್ವಜ ಕಿತ್ತುಹಾಕುವ ಹೇಳಿಕೆಯನ್ನು ಕೊಡುತ್ತಿದ್ದೀರಾ. ತಾಲಿಬಾನ್ ಧ್ವಜ ಎಂದು ಹೇಳಿಕೆ ಕೊಟ್ಟಿದ್ದೀರಿ. ಬಿಜೆಪಿಯವರದ್ದು ಸಂವಿಧಾನವಿರೋಧಿ ಹೇಳಿಕೆ ಅಲ್ಲವೇ? ಎಂದು ಪ್ರಶ್ನಿಸಿದರು. ಈ ವೇಳೆ ಶಾಸಕಿ ನಯನಾ ಮೋಟಮ್ಮ ಬಿಜೆಪಿಯವರು ಹನುಮ ಧ್ವಜ ಬೇಕಾ? ರಾಷ್ಟ್ರ ಧ್ವಜ ಬೇಕಾ? ಎಂಬುದನ್ನು ಹೇಳಲಿ ಎಂದು ಆಗ್ರಹಿಸಿದರು. ಇದೇ ವೇಳೆ ಕಾಂಗ್ರೆಸ್ ಶಾಸಕ ರವಿ ಗಣಿಗ ರಾಷ್ಟ್ರಧ್ವಜದ ವಿರುದ್ಧ ಬಿಜೆಪಿ ಹೋರಾಟವೇ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ ಕೋಲಾಹಲ ನಡೆಯಿಯಿತು.

ಮಧ್ಯಪ್ರವೇಶ ಮಾಡಿದ ಸ್ಪೀಕರ್ ಖಾದರ್ ರಾಷ್ಟ್ರಧ್ವಜಕ್ಕೆ ಯಾರೂ ಅಪಮಾನ ಮಾಡಬಾರದು. ಅವಮಾನ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...